ADVERTISEMENT

ಸ್ವಾತಂತ್ರ್ಯ ದಿನ, ಗಣೇಶ ಚತುರ್ಥಿ: ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 4:31 IST
Last Updated 6 ಆಗಸ್ಟ್ 2025, 4:31 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ–ಮಡಗಾಂವ್ ಮತ್ತು ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ತಲಾ ಒಂದು ಟ್ರಿಪ್ ಸಂಚಾರಕ್ಕೆ ನೈರುತ್ಯ ರೈಲ್ವೆ ನಿರ್ಧರಿಸಿದೆ.

ADVERTISEMENT

ಆಗಸ್ಟ್ 14ರಂದು ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ (06541) ರೈಲು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, 15ರಂದು ಸಂಜೆ 6.05ಕ್ಕೆ ಮಡಗಾಂವ್ ತಲುಪಲಿದೆ. ಆ.17ರಂದು ಮಡಗಾಂವ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (06542) ರೈಲು ರಾತ್ರಿ 10.15ಕ್ಕೆ ಮಡಗಾಂವ್‌ನಿಂದ ಹೊರಟು, 18ರಂದು ಸಂಜೆ 4.30ಕ್ಕೆ ಯಶವಂತಪುರ ತಲುಪಲಿದೆ.

ಎರಡೂ ಮಾರ್ಗಗಳಲ್ಲಿ ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿವೆ. ಎರಡೂ ರೈಲುಗಳು 12 ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎರಡು ಎಸ್‌ಎಲ್‌ಆರ್/ಡಿ ಸೇರಿದಂತೆ ಒಟ್ಟು 18 ಬೋಗಿಗಳನ್ನು ಹೊಂದಿವೆ.

ಆ.22ರಂದು ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (06571) ರೈಲು ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು, 23ರಂದು ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.  ಆ.23ರಂದು ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (06572) ರೈಲು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, 24ರಂದು ಮುಂಜಾನೆ 5ಗಂಟೆಗೆ  ಬೆಂಗಳೂರು ತಲುಪಲಿದೆ. 

ಆ.26ರಂದು ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (06573) ರೈಲು, 7 ಗಂಟೆಗೆ ಬೆಂಗಳೂರಿನಿಂದ ಹೊರಟು, 27ರಂದು ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ. ಆ.27ರಂದು ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (06574) ರೈಲು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, 28ರಂದು ಮುಂಜಾನೆ 5 ಗಂಟೆಗೆ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಒಂದು ಎಸಿ ಟು ಟೈಯರ್, ಮೂರು ಎಸಿ ತ್ರಿ ಟೈಯರ್, 10 ಸ್ಲೀಪರ್ ಕ್ಲಾಸ್, ಮೂರು ಜನರಲ್‌  ಸೆಕೆಂಡ್‌ ಕ್ಲಾಸ್‌ ಮತ್ತು ಎರಡು ಎಸ್‌ಎಲ್‌ಆರ್/ಡಿ ಸೇರಿದಂತೆ ಒಟ್ಟು 19 ಬೋಗಿಗಳಿವೆ.

ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸಲು, ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ರೈಲ್ವೆ ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.