ADVERTISEMENT

ಶಿರಸಿ ಜಾತ್ರೆ: ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 6:37 IST
Last Updated 24 ಫೆಬ್ರುವರಿ 2026, 6:37 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ಶಿರಸಿಯ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ADVERTISEMENT

ರೈಲು (06587) ಫೆ.27ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು (06588) ಫೆ.28ರಂದು ಬೆಳಿಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡ್ಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸೇವೆ ವಿಸ್ತರಣೆ: ಜಾತ್ರೆಯ ಅಂಗವಾಗಿ ಯಶವಂತಪುರ–ಶಿವಮೊಗ್ಗ ನಡುವೆ ಸಂಚರಿಸುವ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ.

ಯಶವಂತಪುರದಿಂದ ಹೊರಡುವ ರೈಲು ಶಿವಮೊಗ್ಗದ ಬದಲಾಗಿ ತಾಳಗುಪ್ಪವರೆಗೆ ಸಂಚರಿಸಲಿದೆ. ಈ ರೈಲು ಶಿವಮೊಗ್ಗದ ಬದಲು ತಾಳಗುಪ್ಪದಿಂದಲೇ ಪ್ರಯಾಣ ಆರಂಭಿಸಲಿದೆ. ಈ ವಿಸ್ತರಣೆಯು ಒಂದು ಟ್ರಿಪ್‌ಗೆ ಮಾತ್ರ ಅನ್ವಯಿಸಲಿದೆ.

ಮಾರ್ಚ್ 1ರಂದು ಯಶವಂತಪುರದಿಂದ ರಾತ್ರಿ 12.15ಕ್ಕೆ ಹೊರಟು ಬೆಳಿಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದೆ. ಅದೇ ದಿನ ರಾತ್ರಿ 10 ಗಂಟೆಗೆ ತಾಳಗುಪ್ಪದಿಂದ ಹೊರಟು, ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ.

ಶಿವಮೊಗ್ಗದಿಂದ ಮುಂದಕ್ಕೆ ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡ್ಡೇರಿ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.