ADVERTISEMENT

ಕರ್ನಾಟಕದ ಏಳಿಗೆಗೆ ಪಾಪು ಕೊಡುಗೆ ಅಪಾರ: ಸಾಹಿತಿ ಶ್ರೀನಿವಾಸ ವಾಡಪ್ಪಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2024, 16:23 IST
Last Updated 14 ಜನವರಿ 2024, 16:23 IST
<div class="paragraphs"><p>ಧಾರವಾಡದಲ್ಲಿ ಏರ್ಪಡಿಸಿದ್ದ ಪಾಟೀಲ ಪುಟ್ಟಪ್ಪ ಅವರು ಜನ್ಮ ದಿನಾಚರಣೆಯಲ್ಲಿ ಶ್ರೀನಿವಾಸ ವಾಡಪ್ಪಿ, ಬಸವಪ್ರಭು ಹೊಸಕೇರಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಶಂಕರ ಕುಂಬಿ ಪಾಲ್ಗೊಂಡಿದ್ದರು</p></div>

ಧಾರವಾಡದಲ್ಲಿ ಏರ್ಪಡಿಸಿದ್ದ ಪಾಟೀಲ ಪುಟ್ಟಪ್ಪ ಅವರು ಜನ್ಮ ದಿನಾಚರಣೆಯಲ್ಲಿ ಶ್ರೀನಿವಾಸ ವಾಡಪ್ಪಿ, ಬಸವಪ್ರಭು ಹೊಸಕೇರಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಶಂಕರ ಕುಂಬಿ ಪಾಲ್ಗೊಂಡಿದ್ದರು

   

ಧಾರವಾಡ: ‘ಪಾಟೀಲ ಪುಟ್ಟಪ್ಪ ಅವರು ಕನ್ನಡ, ಕರ್ನಾಟಕದ ಏಳಿಗೆಗೆ ಶ್ರಮಿಸಿದವರು. ಅವರ ಕಾರ್ಯಗಳು ನಮಗೆ ದಾರಿದೀಪ’ ಎಂದು ಸಾಹಿತಿ ಶ್ರೀನಿವಾಸ ವಾಡಪ್ಪಿ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘವು ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಿದ್ದ ಪಾಟೀಲ ಪುಟ್ಟಪ್ಪ ಅವರ 104ನೇ ಜನ್ಮದಿನಾಚರಣೆಯಲ್ಲಿ ಮಾನತಾಡಿದರು. ಪುಟ್ಟಪ್ಪ ಅವರು ಗಾಂಧೀಜಿ ಅವರಿಂದ ಪ್ರೇರೆಪಿತರಾಗಿದ್ದರು. ಕನ್ನಡ ಕಾವಲು ಮತ್ತು ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು ಎಂದರು.

ADVERTISEMENT

ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಮಾತನಾಡಿ, ಪಾಪು ಅವರು ರಾಜ್ಯಸಭಾ ಸದಸ್ಯರಾಗಿ ಎರಡು ಅವಧಿಯಲ್ಲಿ ದೇಶದ ಕೆಲಸ ಕಾರ್ಯಗಳಿಗೆ ತೊಡಗಿಸಿಕೊಂಡವರು. ‘ಪ್ರಪಂಚ’ ವಾರ ಪತ್ರಿಕೆ ಮೂಲಕ ಬದುಕಿನುದ್ದಕ್ಕೂ ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಮಾಡಿದರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.