ADVERTISEMENT

ಸ್ವಂತ ಉದ್ಯೋಗ ಮಾಡಲು ಸಲಹೆ: ಉಮಾದೇವಿ ಬಸಾಪುರ

​ಪ್ರಜಾವಾಣಿ ವಾರ್ತೆ
Published 3 ಮೇ 2022, 4:21 IST
Last Updated 3 ಮೇ 2022, 4:21 IST
ಕಲಘಟಗಿ ತಾಲ್ಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಹುಬ್ಬಳ್ಳಿಯ ಪ್ಯುಲ್ ಸಂಸ್ಥೆಯವರು ಹಮ್ಮಿಕೊಂಡಿದ್ದ ‘ಎಸ್‌ಎಸ್‌ಎಲ್‌ಸಿ ನಂತರ ಮುಂದೇನು’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಕಲಘಟಗಿ ತಾಲ್ಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಹುಬ್ಬಳ್ಳಿಯ ಪ್ಯುಲ್ ಸಂಸ್ಥೆಯವರು ಹಮ್ಮಿಕೊಂಡಿದ್ದ ‘ಎಸ್‌ಎಸ್‌ಎಲ್‌ಸಿ ನಂತರ ಮುಂದೇನು’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು   

ಕಲಘಟಗಿ: ಸ್ಪರ್ಧಾತ್ಮಕ ಯುಗದಲ್ಲಿ ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಸೇರದೆ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಗಳು ಸ್ವಂತ ಉದ್ಯೋಗ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತಾಲ್ಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಹುಬ್ಬಳ್ಳಿಯ ಪ್ಯುಲ್ ಸಂಸ್ಥೆಯವರು ಹಮ್ಮಿಕೊಂಡಿದ್ದ ‘ಎಸ್‌ಎಸ್‌ಎಲ್‌ಸಿ ನಂತರ ಮುಂದೇನು’ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಸಂಸ್ಥೆಯ ಅಧ್ಯಕ್ಷ ವಿವೇಕ ನಾಯ್ಕ ಮಾತನಾಡಿದರು. ಅನಂತ ಪ್ಯುಲ್ ಸಂಸ್ಥೆಯವರು ಪಿಪಿಟಿ ಮೂಲಕ ಮಕ್ಕಳ ಜೊತೆ ಸಂವಾದ ರೂಪದಲ್ಲಿ ವಿವಿಧ ಕೊರ್ಸ್ ಹಾಗೂ ಉದ್ಯೋಗವಕಾಶಗಳ ಕುರಿತು ಮಾಹಿತಿ ನೀಡಿದರು.

ADVERTISEMENT

ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್ ಕೆ.ಎಫ್. ಶಾಲೆಯ ಮುಖ್ಯ ಶಿಕ್ಷಕ ಶ್ಯಾಮ ಶೇರಖಾನೆ ಅಧ್ಯಕ್ಷತೆ ವಹಿಸಿದ್ದರು. ಸಿ.ಸಿ. ಅಳಗೋಡಿ, ಕೌಸ್ತುಬ ಸಂಶಿಕರ, ಸಂಜಯ ಕುನ್ನಾಳ, ಎಂ.ಆರ್. ರಾಮನಗೌಡ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.