ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಕೊನೆಗೂ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.
ಆ.16 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23 ನಾಮಪತ್ರ ಸಲ್ಲಿಸಲು ಕೊನೆಯ ದಿನ.
ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಸೆ.3 ರಂದು ಮತದಾನ ನಡೆಯಲಿದೆ.
82 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ. ಎರಡೂವರೆ ವರ್ಷಗಳಿಂದ ಆಡಳಿತಾಧಿಕಾರಿಯೇ ಆಡಳಿತ ನಡೆಸುತ್ತಿದ್ದರು.
ಚುನಾವಣೆ ಘೋಷಣೆಯಿಂದ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪ್ರಬಲವಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.