ADVERTISEMENT

ರಾಜ್ಯ ಸರ್ಕಾರ ಬೂಟಾಟಿಕೆ ಬಿಡಲಿ: ಶಾಸಕ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 6:47 IST
Last Updated 27 ಜನವರಿ 2026, 6:47 IST
ಮಹೇಶ ಟೆಂಗಿನಕಾಯಿ
ಮಹೇಶ ಟೆಂಗಿನಕಾಯಿ   

ಹುಬ್ಬಳ್ಳಿ: ‘ಕಾಂಗ್ರೆಸ್ ನಾಯಕರು ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಹುದ್ದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೇಲೆ ವಿಶ್ವಾಸ ಇದೆಯೇ ಇಲ್ಲವೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ಮೊದಲ ಹಾಗೂ ಕೊನೆಯ ಪುಟ ಓದಿದ್ದಾರೆ. ರಾಷ್ಟ್ರಗೀತೆ ಹಾಕುವ ಕೆಲಸ ಯಾರದ್ದು? ರಾಜ್ಯ ಸರ್ಕಾರ ಇಂತಹ ಬೂಟಾಟಿಕೆ ಬಿಡಬೇಕು’ ಎಂದರು.

‘ವಿಬಿ ಜಿ ರಾಮ್‌ ಜಿ’ ಯೋಜನೆ ಮೂಲಕ ಕೇಂದ್ರ ಸರ್ಕಾರವು ಗ್ರಾಮೀಣ ಜನರಿಗೆ ಅನುಕೂಲ ಮಾಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ಅನುದಾನ ನೀಡಬೇಕು. ಆದರೆ ರಾಜ್ಯ ಸರ್ಕಾರಕ್ಕೆ ಅನುದಾನ ಕೊಡಲು ಆಗದಿರುವ ಕಾರಣ ಯೋಜನೆ ವಿರೋಧಿಸುತ್ತಿದೆ’ ಎಂದು ಅರೋಪಿಸಿದರು.

ADVERTISEMENT

‘ರಾಜ್ಯ ಸರ್ಕಾರವು ಮನೆ ಹಂಚಿಕೆ ಹಾಗೂ ಹಕ್ಕುಪತ್ರ ವಿತರಿಸಲು ನಮ್ಮ ಅಭ್ಯಂತರವಿಲ್ಲ. ಈ ಸಮಾರಂಭಕ್ಕೆ ಜನರ ಸೇರಿಸಲು ಮದ್ಯ ಹಂಚಲಾಗಿದ್ದು, ಇದರ ಅರ್ಥವೇನು? 2 ಲಕ್ಷ ಜನರನ್ನು ಸೇರಿಸಲು ಮದ್ಯ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.