ADVERTISEMENT

ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರ ರಾಜ್ಯ ಮಟ್ಟದ ಸಮ್ಮೇಳನ ಮೇ 8ಕ್ಕೆ

​ಪ್ರಜಾವಾಣಿ ವಾರ್ತೆ
Published 5 ಮೇ 2022, 9:19 IST
Last Updated 5 ಮೇ 2022, 9:19 IST

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಮೇ‌ 8ರಂದು ಹುಬ್ಬಳ್ಳಿಯ ಬೆಂಗೇರಿ ಮುಖ್ಯರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಸೆಂಟ್ರಲ್ ಮೈದಾನದಲ್ಲಿ ರಾಜ್ಯ ಮಟ್ಟದ ಹಿರಿಯ ನಾಗರಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಬಿ.ಎ. ಪಾಟೀಲ‌ ಹೇಳಿದರು.

‘ಸಮಾವೇಶವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಹಿರಿಯ ನಾಗರಿಕರ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನುಶಾಸಕ ಜಗದೀಶ ಶೆಟ್ಟರ್ ಹಾಗೂ ಹಿರಿಯರ ಕಾನೂನು ಪುಸ್ತಕವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆ ಮಾಡಲಿದ್ದಾರೆ. ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸನ್ಮಾನ ಮಾಡಲಾಗುವುದು’ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಅತಿಥಿಗಳಾಗಿಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ, ಎಸ್‌.ವಿ. ಸಂಕನೂರ, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರಫ್ತು ನಿಗಮದ ಎಸ್.ಐ. ಚಿಕ್ಕನಗೌಡ್ರ, ಸಾಬೂನು ಮತ್ತು ಮಾರ್ಜಕ ಮಂಡಳಿಯ ಮಲ್ಲಿಕಾರ್ಜುನ ಸಾವಕಾರ, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಸಂಸ್ಕಾರ ವಿದ್ಯಾಸಂಸ್ಥೆ ಅಧ್ಯಕ್ಷ ಮಹೇಂದ್ರ ಸಿಂಘಿ, ಪಾಲಿಕೆ ಸದಸ್ಯರಾದ ಬೀರಪ್ಪ ಖಂಡೇಕರ ಹಾಗೂ ಪ್ರಕಾಶ ಕುರಟ್ಟಿ ಭಾಗವಹಿಸಲಿದ್ದಾರೆ’ ಎಂದರು.

ADVERTISEMENT

‘ವಿಶೇಷ ಆಹ್ವಾನಿತರಾಗಿ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಪಾಟೀಲ, ಬಿಜೆಪಿ ಮುಖಂಡ ಡಾ. ಪಾಂಡುರಂಗ ಪಾಟೀಲ, ಸಮಾಜ ಸೇವಕ ವಿ.ಎಸ್‌.ವಿ. ಪ್ರಸಾದ್, ಪಾಲಿಕೆಯ ಮಾಜಿ ಸದಸ್ಯ ಹೂವಪ್ಪ ದಾಯಗೋಡಿ, ಸಂಶೋಧಕಿ ಡಾ. ಹನುಮಾಕ್ಷಿ ಗೋಗಿ, ನಿವೃತ್ತ ನ್ಯಾಯಾಧೀಶ ಎಂ.ಎನ್. ಗದಗ, ಪ್ರೊಬಸ್ ಕ್ಲಬ್ ಅಧ್ಯಕ್ಷ ಬಸವರಾಜ ಹೆಬಸೂರ ಹಾಗೂ ಸಿದ್ಧಾರೂಢ ಮಠ ಟ್ರಸ್ಟ್ ಅಧ್ಯಕ್ಷ ಡಿ.ಡಿ. ಮಾಳಗಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

‘ರಾಜ್ಯದಲ್ಲಿದ್ದಾರೆ 70 ಲಕ್ಷ ಹಿರಿಯ ನಾಗರಿಕರು’
‘ರಾಜ್ಯದಲ್ಲಿ 70 ಲಕ್ಷ ಹಿರಿಯ ನಾಗರಿಕರಿದ್ದಾರೆ. ಅವರ ಸೌಲಭ್ಯಗಳ ಬಗ್ಗೆ ಹೆಚ್ಚಿನ ಅರಿವಿನ ಜೊತೆಗೆ, ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಅವರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯಗಳಿಗೆ ಕಾನೂನಿನ ನೆರವು ಒದಗಿಸಬೇಕಿದೆ.‌ ಈ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಕೈಗೊಳ್ಳುವ ಹದಿನೈದು ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು‌’ ಎಂದು ಬಿ.ಎ. ಪಾಟೀಲ‌ ಹೇಳಿದರು.

ಸಂಘದ ಪಿ.ಪಿ. ಗಾಯಕವಾಡ, ವಿ.ಬಿ. ಮತ್ತೂರ, ಸುನಂದಾ ಬೆನ್ನೂರ, ಡಿ.ಟಿ. ಪಾಟೀಲ, ಎಂ.ಎಂ. ದಾಮೋದರ, ಜಿ.ಸಿ. ಅರಳಿ, ಕೆ.ಪಿ. ಘಂಟಿ, ಡಿ.ಸಿ. ಪಾಟೀಲ, ಡಾ. ರಮೇಶ ಅಂಗಡಿ, ಆರ್‌.ಎಸ್. ಹಾಲೇವಾಡಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.