ADVERTISEMENT

ವೀರಶೈವ ಪದ ತೆಗೆಯುವ ಹೇಳಿಕೆ ಸರಿಯಲ್ಲ: ರಾಜಶೇಖರ ಶಿವಾಚಾರ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 13:40 IST
Last Updated 29 ಮಾರ್ಚ್ 2025, 13:40 IST
ಧಾರವಾಡದ ಮಳೇಮಲ್ಲೇಶ್ವರ ಸಂಸ್ಥಾನ ಹಿರೇಮಠದಲ್ಲಿ ಈಚೆಗೆ ನಡೆದ ರೇಣುಕಾಚಾರ್ಯ ಜಯಂತ್ಯುತ್ಸವದಲ್ಲಿ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು 
ಧಾರವಾಡದ ಮಳೇಮಲ್ಲೇಶ್ವರ ಸಂಸ್ಥಾನ ಹಿರೇಮಠದಲ್ಲಿ ಈಚೆಗೆ ನಡೆದ ರೇಣುಕಾಚಾರ್ಯ ಜಯಂತ್ಯುತ್ಸವದಲ್ಲಿ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು     

ಧಾರವಾಡ: ‘ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಿಂದ ವೀರಶೈವ ಪದ ತೆಗೆಯಬೇಕೆಂದು ಕೆಲವರು ಸಮಾಜದ ಜನರ ದಾರಿ ತಪ್ಪಿಸುತ್ತಿದ್ದಾರೆ. ಬಸವಾದಿ ಶರಣರ ವಚನಗಳಲ್ಲೇ ವೀರಶೈವ ಪದವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕು’ ಎಂದು ನವನಗರದ ಕಾಶಿ ಶಾಖಾಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಹೊಸಯಲ್ಲಾಪುರಸ ಮಳೇಮಲ್ಲೇಶ್ವರ ಸಂಸ್ಥಾನ ಹಿರೇಮಠದಲ್ಲಿ ಈಚೆಗೆ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

‘ಪಂಚಪೀಠಗಳು, ಬಸವಾದಿ ಶರಣರು ಬೇರೆಯಲ್ಲ. ಇವರೆಲ್ಲರೂ ವೀರಶೈವ–ಲಿಂಗಾಯತ ಧರ್ಮಕ್ಕೆ ಶಕ್ತಿ ನೀಡಿದವರು. ಸರಿಯಾಗಿ ಅಧ್ಯಯನ ಮಾಡದೆ, ಸಮಾಜದ ದಾರಿ ತಪ್ಪಿಸಲಾಗುತ್ತಿದೆ. ವೀರಶೈವ ಪದ ತೆಗೆದುಹಾಕಬೇಕೆಂದು ಹೇಳಿದವರಿಗೆ ಪಾಠ ಕಲಿಸಬೇಕು’ ಎಂದರು.

ADVERTISEMENT

‘ಬಸವಾದಿ ಶರಣರ ನುಡಿದ ನುಡಿಗಳಲ್ಲಿ, ಬರೆದ ವಚನಗಳಲ್ಲಿ ವೀರಶೈವ ಎಂಬುದಿದೆ. ಸರಿಯಾಗಿ ಅಧ್ಯಯನ ಮಾಡಿ ಈ ಬಗ್ಗೆ ಜಾಗೃತರಾಗುವ ಬದಲು ಸಮಾಜ ಒಡೆಯುವ ಕೃತ್ಯ ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.

ಹೊಸಯಲ್ಲಾಪೂರ ಹಿರೇಮಠದ ಶಶಾಂಕ ಸ್ವಾಮೀಜಿ ಮಾತನಾಡಿ, ‘ವೀರಶೈವ ಧರ್ಮ ಸ್ಥಾಪನೆ ಮಾಡಿದ ರೇಣುಕಾಚಾರ್ಯರು ಮಾನವ ಕುಲದ ಒಳಿತಿಗಾಗಿ ಶ್ರಮಿಸಿದರು. ಅವರ ಆಶಯದಂತೆ ಎಲ್ಲರೂ ಬದುಕಬೇಕು. ಸಮಾಜದ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳಬೇಕು’ ಎಂದರು.

ಗದಿಗಯ್ಯ ಸ್ವಾಮೀಜಿ, ಕರಡಿಗುಡ್ಡದ ಚನ್ನಬಸವ ಸ್ವಾಮೀಜಿ, ಮಂಜುನಾಥ ಹಿರೇಮಠ, ರಾಜೇಂದ್ರ ಹಿರೇಮಠ, ಸರೋಜಾ ಪಾಟೀಲ, ಸಿ.ಎನ್. ಹಿರೇಮಠ, ಶಕುಂತಲಾ ಹಿರೇಮಠ, ಜಯಲಕ್ಷ್ಮಿ ಹಿರೇಮಠ, ಬಸವರಾಜ ಕುರಹಟ್ಟಿಮಠ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.