ADVERTISEMENT

ಹುಬ್ಬಳ್ಳಿಯಯ ದಿಡ್ಡಿ ಹನುಮಂತ ದೇವಸ್ಥಾನದ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 9:28 IST
Last Updated 17 ಏಪ್ರಿಲ್ 2022, 9:28 IST
ದಿಡ್ಡಿ ಹನುಮಂತ ದೇವಸ್ಥಾನ
ದಿಡ್ಡಿ ಹನುಮಂತ ದೇವಸ್ಥಾನ   

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಘಟನೆ ಒಂದಿಲ್ಲೊಂದು ರೀತಿಯಲ್ಲಿ ಗಲಭೆ ಸೃಷ್ಟಿಸುವ ವಾತಾವರಣ ನಿರ್ಮಾಣ ಮಾಡುತ್ತಿವೆ. ಮುಸ್ಲಿಂ ಧಾರ್ಮಿಕತೆಗೆ ದಕ್ಕೆ ಉಂಟಾಗುವ ವಿಡಿಯೋ ಪೋಸ್ಟ್ ಆದ ಬೆನ್ನಲ್ಲೇ ಕಿಡಗೇಡಿಗಳು ಹಳೆ ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವರ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಹೌದು.. ನಿನ್ನೆ ತಡರಾತ್ರಿ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಎದುರಿನಲ್ಲಿ ನಡೆದ ಕಲ್ಲು ತೂರಾಟದ ಬಿಸಿ ದಿಡ್ಡಿ ಹನುಮಂತ ದೇವರ ದೇವಸ್ಥಾನಕ್ಕೂ ತಟ್ಟಿದ್ದು, ಮತ್ತಷ್ಟು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ.

ಹನುಮಂತ ದೇವರ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಗೇಡಿಗಳು ದೇವಸ್ಥಾನದ ಕಿಟಕಿ ಗಾಜು ಒಡೆದು ಧ್ವಂಸ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ಬಿಗಿ ಭದ್ರತೆ ನಿಯೋಜನೆ ಮಾಡಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಇಂತಹ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.