ADVERTISEMENT

ಹುಬ್ಬಳ್ಳಿ | ಬೀದಿನಾಯಿ ದಾಳಿ, ಬಾಲಕಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 2:24 IST
Last Updated 9 ಸೆಪ್ಟೆಂಬರ್ 2025, 2:24 IST
<div class="paragraphs"><p> ಬೀದಿನಾಯಿ</p></div>

ಬೀದಿನಾಯಿ

   

ಹುಬ್ಬಳ್ಳಿ: ಹಳೇಹುಬ್ಬಳ್ಳಿಯ ಶಿಮ್ಲಾನಗರದಲ್ಲಿ ಮಂಗಳವಾರ ಬೆಳಿಗ್ಗೆ ಒಂಬತ್ತು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಗಾಯಗೊಂಡ ಅವಳನ್ನು ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕಿ ಖಮರುನ್ನೀಸ್ ಕಿರಾಣಿ ಅಂಗಡಿಗೆ ಹೋಗಿ ಮರಳಿ ಮನೆಗೆ ಬರುವಾಗ ಏಕಾಏಕಿ ಎರಡು ನಾಯಿಗಳು ದಾಳಿ ಮಾಡಿವೆ. ಈ ಭಾಗದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ನಾಯಿಗಳ ನಿಯಂತ್ರಣಕ್ಕೆ ಪಾಲಿಕೆ ಅಧಿಕಾರಿಗಳು ಮುಂದಾಗಬೇಕು ಎಂದು ಪಾಲಿಕೆ ಸದಸ್ಯ ನಜೀರ್‌ಅಹ್ಮದ್ ಹೊನ್ಯಾಳ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.