ಧಾರವಾಡ: ‘ಸಮಾಜದ ಕೆಲಸ ದೇವರ ಕೆಲಸ ಎಂದರಿತು, ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು’ ಎಂದು ಶಿವಶಿಂಪಿ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಶಿವಾನಂದ ಶಿವಶಿಂಪಿ ಹೇಳಿದರು.
ಇಲ್ಲಿನ ಅಕ್ಕನ ಬಳಗದಲ್ಲಿ ಈಚೆಗೆ ನಡೆದ ಜಿಲ್ಲಾ ಶಿವಸಿಂಪಿ ಸಮಾವೇಶದಲ್ಲಿ ಮಾತನಾಡಿದರು.
‘ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡಬೇಕು. ಶಿವಶಿಂಪಿ ಸೌಹಾರ್ದ ಸಹಕಾರ ಸಂಘದ ಶಾಖೆಗಳನ್ನು ರಾಜ್ಯದ ವಿವಿಧೆಡೆ ಪ್ರಾರಂಭಿಸಲು ಉದ್ದೇಶಿಸಲಾಗಿದೆ’ ಎಂದರು.
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಾಧಕರನ್ನು ಸನ್ಮಾನಿಸಲಾಯಿತು.
ಉಪ್ಪಿನಬೆಟಗೇರಿಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪಂಚಲಿಂಗಪ್ಪ ಎಸ್. ಖೋದಾನಪೂರ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಡಿ. ಸಣಕಲ್ , ಕಾರ್ಯಾಧ್ಯಕ್ಷ ಮಹಾಂತೇಶ ಕುಬಸದ , ಉಪಾಧ್ಯಕ್ಷ ರೇವಣಸಿದ್ದಪ್ಪ ಮ. ಕಲ್ಯಾಣಶೆಟ್ಟಿ, ಷಣ್ಮುಖಪ್ಪ ಎಸ್. ನಾಗಠಾಣ, ಈರಣ್ಣ ಮುದಕವಿ, ಗುರಪ್ಪ ಎಂ.ಪಾವಟೆ, ಕಸ್ತೂರಿ ಮುದಕವಿ, ಪ್ರವೀಣ ಈರಪ್ಪ ಕಡಿಬಾಗಿಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.