ADVERTISEMENT

ಹುಬ್ಬಳ್ಳಿ: ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 5:22 IST
Last Updated 15 ಸೆಪ್ಟೆಂಬರ್ 2025, 5:22 IST
   

ಹುಬ್ಬಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ (ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ ₹2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದವರ ಪೋಷಕರ ವಾರ್ಷಿಕ ವರಮಾನ ₹1 ಲಕ್ಷ ಒಳಗೆ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವೆಬ್‌ಸೈಟ್ https://shp.karnataka.gov.in/bcwd ಮೂಲಕ ಅ.4ರೊಳಗೆ ಅರ್ಜಿ ಸಲ್ಲಿಸಬೇಕು. 

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದರೆ bcwdhelpline@gmail.com ಇಮೇಲ್ ಮೂಲಕ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ADVERTISEMENT

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 80507 70004, 80507 70005 ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನಾ ಕ್ಯಾಸನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.