ಧಾರವಾಡ: 2024-25 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ85 ಕ್ಕಿಂತ ಹೆಚ್ಚು ಅಂಕ ಪಡೆದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ (ಆರ್ಥಿಕವಾಗಿ ಹಿಂದುಳಿದ ಕುಟುಂಬದವರು) ಮೌನೇಶ್ವರ ಧರ್ಮನಿಧಿ ಸಂಸ್ಥೆ ವತಿಯಿಂದ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾರುದ್ರ ಬಡಿಗೇರ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ಹಿತೈಷಿಗಳ ಆರ್ಥಿಕ ನೆರವಿನಿಂದ ಪ್ರತಿವರ್ಷ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಸನ್ಮಾನಿಸಲಾಗುವುದು. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದರು.
ಆಗಸ್ಟ್ 7ರೊಳಗೆ ನಗರದ ಕಸಬಾ ಗೌಡರ ಓಣಿಯ ಮೌನೇಶ್ವರ ಧರ್ಮನಿಧಿ ಸಂಸ್ಥೆಗೆ ಅರ್ಜಿ ತಲುಪಿಸಬೇಕು. ಮಾಹಿತಿಗಾಗಿ ಮೊ: 9880001666, 9972207510 ಸಂಪರ್ಕಿಸಬಹುದು ಎಂದರು.
ಸಂಸ್ಥೆಯ ಕಾರ್ಯದರ್ಶಿ ರಘುವೀರ ಬಡಿಗೇರ, ಆರ್.ಸಿ.ನೇಗಿನಾಳ, ವಸಂತ ಅರ್ಕಾಚಾರ, ವಸಂತ ಕಿಲ್ಲೇದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.