ADVERTISEMENT

₹150 ಕೋಟಿ ವೆಚ್ಚದಲ್ಲಿ ಉಪರಸ್ತೆಗಳ ಅಭಿವೃದ್ಧಿ

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್; ಯುಜಿಡಿ ಕಾಮಗಾರಿಗೆ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 12:38 IST
Last Updated 17 ನವೆಂಬರ್ 2020, 12:38 IST
ಹುಬ್ಬಳ್ಳಿಯ ಬಾದಾಮಿ ನಗರದಲ್ಲಿ ಯುಜಿಡಿ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು
ಹುಬ್ಬಳ್ಳಿಯ ಬಾದಾಮಿ ನಗರದಲ್ಲಿ ಯುಜಿಡಿ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು   

ಹುಬ್ಬಳ್ಳಿ: ‘ನಗರದ ಎಲ್ಲಾ ಉಪರಸ್ತೆಗಳನ್ನು ₹150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಗೆ ಅನುಮೋದನೆ ದೊರೆತಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದ ಬಾದಾಮಿ ನಗರದಲ್ಲಿ ಮಂಗಳವಾರ ಯುಜಿಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಲೋಕೋಪಯೋಗಿ ಇಲಾಖೆಯಿಂದ ₹50 ಕೋಟಿ ವೆಚ್ಚದಲ್ಲಿ ಗದಗ ರಸ್ತೆಯ ರೈಲ್ವೆ ಕೆಳ ಸೇತುವೆಯಿಂದ ಕೇಶ್ವಾಪುರ, ಬೆಂಗೇರಿ, ಗೋಪನಕೊಪ್ಪ, ಗಂಗೂಬಾಯಿ ಹಾನಗಲ್ ಸಂಗೀತ ಶಾಲೆಯಿಂದ ಉಣಕಲ್‌ವರೆಗೆ ಸುಸಜ್ಜಿತ ರಸ್ತೆ ನಿರ್ಮಾಣವಾಗುತ್ತಿದೆ. ಬಾದಾಮಿ ನಗರದ ಉಪ ಮುಖ್ಯರಸ್ತೆ ಸಹ ಅಭಿವೃದ್ಧಿಪಡಿಸಲಾಗುತ್ತಿದ್ದು, ನಾಲ್ಕು ತಿಂಗಳೊಳಗೆ ಮುಗಿಯಲಿದೆ’ ಎಂದರು.

‘ಅವಳಿನಗರದ ರಸ್ತೆಗಳ ಅಭಿವೃದ್ಧಿಗಾಗಿ ₹400 ಕೋಟಿ ಸಿಆರ್‌ಎಫ್ ಅನುದಾನ ಮಂಜೂರಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ರೈಲ್ವೆ ಸ್ಟೇಷನ್ ರಸ್ತೆ, ಲ್ಯಾಮಿಂಗ್ಟನ್ ಹಾಗೂ ಕೋಪ್ಪಿಕರ ರಸ್ತೆಗಳನ್ನು‌ ಅಭಿವೃದ್ಧಿಪಡಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಅನುದಾನದಲ್ಲಿ ಮಧುರಾ ಕಾಲೋನಿ ರಸ್ತೆಯನ್ನು ಸಹ ಅಭಿವೃದ್ಧಿಪಡಿಸಲಾಗಿದೆ. ಲಾಕ್‌ಡೌನ್, ಕಾರ್ಮಿಕರ ಕೊರತೆ ಹಾಗೂ ಮಳೆಯಿಂದಾಗಿ ಕೆಲ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ. ಏಳೆಂಟು ತಿಂಗಳಲ್ಲಿ ಎಲ್ಲಾ ರಸ್ತೆಗಳು ಅಭಿವೃದ್ಧಿಗೊಳ್ಳಲಿವೆ’ ಎಂದರು ಹೇಳಿದರು.

ADVERTISEMENT

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಬಿಜೆಪಿ ಮುಖಂಡರಾದ ಮೇನಕಾ ಹುರುಳಿ, ಆರ್.ಆರ್. ಕುಲಕರ್ಣಿ, ಬೀರಪ್ಪ ಖಂಡೇಕರ, ಮಲ್ಲಿಕಾರ್ಜುನ ಸಾವಕಾರ ಹಾಗೂ ಸಂತೋಷ್ ಚೌವ್ಹಾಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.