ADVERTISEMENT

ಸುಳ್ಳು ಹೇಳಿದ ಕಾಂಗ್ರೆಸ್‌ಗೆ ಸುಪ್ರೀಂ ಕಪಾಳಮೋಕ್ಷ: ಪ್ರಹ್ಲಾದ ಜೋಶಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 10:20 IST
Last Updated 23 ಏಪ್ರಿಲ್ 2019, 10:20 IST
ಸಂಸದ ಪ್ರಹ್ಲಾದ ಜೋಶಿ ಹುಬ್ಬಳ್ಳಿಯಲ್ಲಿ ಮತದಾನ ಮಾಡಿದರು –ಪ್ರಜಾವಾಣಿ ಚಿತ್ರ
ಸಂಸದ ಪ್ರಹ್ಲಾದ ಜೋಶಿ ಹುಬ್ಬಳ್ಳಿಯಲ್ಲಿ ಮತದಾನ ಮಾಡಿದರು –ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ‘ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಸುಳ್ಳು ಹೇಳಿಕೆ ನೀಡಿದ ಕಾಂಗ್ರೆಸ್ ಹಾಗೂ ಆ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕಪಾಳಮೋಕ್ಷ ಮಾಡಿದೆ’ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯ ಮತಗಟ್ಟೆ ಸಂಖ್ಯೆ 96ರಲ್ಲಿ ಮಂಗಳವಾರ ಮತದಾನ ಮಾಡಿದ ಅವರು ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘60 ವರ್ಷಗಳಿಂದ ಬರಿ ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು‌ಪಾಠ ಕಲಿಸುವರು. ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ’ಎಂದರು.

ADVERTISEMENT

‘ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ‌ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು. ಪ್ರಧಾನಿ‌ ನರೇಂದ್ರ ಮೋದಿ ಅವರನ್ನು ಜನರು ಬೆಂಬಲಿಸುವ ವಿಶ್ವಾಸವಿದೆ. ರಾಜ್ಯದಲ್ಲಿ 20 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ ಗಳಿಸಲಿದೆ’ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೋಶಿ ಅವರ ಪತ್ನಿ ಜ್ಯೋತಿ ಜೋಶಿ, ಮಕ್ಕಳಾದ ಅರ್ಪಿತಾ, ಅನುಷಾ ಹಾಗೂ ಅವರ ತಾಯಿ ಮಾಲತಿ ಜೋಶಿ ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.