ADVERTISEMENT

ಧಾರವಾಡ | ಶಾಲ್ಮಲಾ ನದಿ ಉಗಮ ಭಾಗ: ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 4:56 IST
Last Updated 3 ಅಕ್ಟೋಬರ್ 2025, 4:56 IST
ಧಾರವಾಡದ ಶಾಲ್ಮಲಾ ನದಿ ಉಗಮ ಸ್ಥಾನದ ಬಳಿ ನಡೆದ ಸಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾಗವಹಿಸಿದರು 
ಧಾರವಾಡದ ಶಾಲ್ಮಲಾ ನದಿ ಉಗಮ ಸ್ಥಾನದ ಬಳಿ ನಡೆದ ಸಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾಗವಹಿಸಿದರು    

ಧಾರವಾಡ: ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಪ್ರಯುಕ್ತ ಗುರುವಾರ ಆಯೋಜಿಸಿದ್ದ ಸೇವಾ ಪಾಕ್ಷಿಕದ ಭಾಗವಾಗಿ ನಡೆದ ಸ್ವಚ್ಛ ಭಾರತ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಿದರು.

ನಗರದ ಕಲಘಟಗಿ ರಸ್ತೆಯ ಶಾಲ್ಮಲಾ ನದಿ ಉಗಮ ಸ್ಥಾನದ ಬಳಿಯ ಮೆಟ್ಟಿಲುಗಳ ಸೇರಿದಂತೆ ಸುತ್ತಲಿನ ಆವರಣವನನ್ನು ಕಸ ಗುಡಿಸಿ ಕಸ ತುಂಬುವುದರ ಮೂಲಕ ಸ್ವಚ್ಛ ಭಾರತ ಆಂದೋಲನಕ್ಕೆ ಸಾಥ್ ನೀಡಿದರು.

ಮೇಯರ್ ಜ್ಯೋತಿ ಪಾಟೀಲ, ಪಾಲಿಕೆ ಸದಸ್ಯ ಶಿವು ಹಿರೇಮಠ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.