ಹುಬ್ಬಳ್ಳಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿಶ್ವ ಕನ್ನಡ ಬಳಗದಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಂಕಪಟ್ಟಿ ಜೆರಾಕ್ಸ್ ಪ್ರತಿ, ಸ್ವವಿವರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಮೊ: 97406 61391 ಸಂಖ್ಯೆಗೆ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಬೇಕು.
ಜುಲೈ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಮೂರುಸಾವಿರ ಮಠದ ಮೂಜಗಂ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಕನ್ನಡ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.