ಹುಬ್ಬಳ್ಳಿ: ನಗರದ ಪ್ರಮುಖ ಭಾಗವಾದ ಅಕ್ಷಯ ಪಾರ್ಕ್ ಬಡಾವಣೆಯ ಚೇತನಾ ಕಾಲೇಜು ಎದುರಿಗಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.
ಅಂದಾಜು 45ರಿಂದ 48 ವರ್ಷ ವಯಸ್ಸಿನ ಪುರುಷ ಜೀನ್ಸ್ ಪ್ಯಾಂಟ್ ಹಾಗೂ ಟಿ ಶರ್ಟ್ ಧರಿಸಿದ್ದಾನೆ. ನೇತಾಡುತ್ತಿದ್ದ ಮೃತದೇಹವನ್ನು ನೋಡಿ ವಾಕಿಂಗ್‌ಗೆ ಹೋಗುತ್ತಿದ್ದ ಜನ ವಿದ್ಯಾನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕಾರಣ ಹಾಗೂ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.