ADVERTISEMENT

ಲಾಕ್‌ಡೌನ್‌ ಪರಿಣಾಮ: ಹುಬ್ಬಳ್ಳಿಯಲ್ಲಿ ಮದ್ಯದಂಗಡಿ ದರೋಡೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 9:53 IST
Last Updated 28 ಮಾರ್ಚ್ 2020, 9:53 IST
   

ಹುಬ್ಬಳ್ಳಿ: ನಗರದ ಗಬ್ಬೂರಿನ ಆರ್‌ಟಿಒ ಕಚೇರಿ ಸಮೀಪ ಇರುವ ಮೈಸೂರು ಸೆಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಮದ್ಯ ಮಾರಾಟ ಮಳಿಗೆಗೆ ಶನಿವಾರ ನುಗ್ಗಿರುವ ಕಳ್ಳರು, ಅಂದಾಜು ₹1.10 ಲಕ್ಷ ಮೌಲ್ಯದ ಮದ್ಯವನ್ನು ಕದ್ದೊಯ್ದಿದ್ದಾರೆ.

ಬೆಳಗಿನ ಜಾವ ಮಳಿಗೆಯ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು, ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT