ADVERTISEMENT

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 7:48 IST
Last Updated 14 ಸೆಪ್ಟೆಂಬರ್ 2022, 7:48 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು   

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಚಾಲಕ ಸೇರಿ ಮೂವರು ಮೃತಪಟ್ಟ ಪ್ರಕರಣ ತಾಲ್ಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ನಡೆದಿದೆ.

ಮಂಗಳವಾರ ತಡರಾತ್ರಿ ಅಪಘಾತ ನಡೆದಿದೆ. ದಾವಣಗೆರೆ ಮೂಲದ ಚಾಲಕ ಶಾರೂಖ್(27), ಸೋಹೆಲ್(26), ಚಿಕ್ಕಮಗಳೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟವರು. ಮತ್ತೊಬ್ಬ ವ್ಯಕ್ತಿ ತೀವ್ರ ಗಾಯಗೊಂಡಿದ್ದು ಕಿಮ್ಸ್'ಗೆ ದಾಖಲಿಸಲಾಗಿದೆ.

ದಾವಣಗೆರೆಯಿಂದ ಅವಲಕ್ಕಿ ವ್ಯಾಪಾರ ಮಾಡಿಕೊಂಡು ರಾತ್ರಿ ಹುಬ್ಬಳ್ಳಿ ಕಡೆಗೆ ಬರುತ್ತಿರುವಾಗ ಅಪಘಾತ ನಡೆದಿದೆ. ಸೋಹೆಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಚಾಲಕ ಶಾರೂಖ್ ಮತ್ತು ಸುಶಿಲಾ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ‌ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.