ADVERTISEMENT

ರೈಲು ‌ನಿಲ್ದಾಣದಲ್ಲೇ ಮುಂಗಡ ಟಿಕೆಟ್‌ ಬುಕ್ಕಿಂಗ್‌ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 21 ಮೇ 2020, 17:47 IST
Last Updated 21 ಮೇ 2020, 17:47 IST

ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಕಾರಣದಿಂದ ರದ್ದು ಮಾಡಲಾಗಿದ್ದ ರೈಲು ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್‌ ಸೌಲಭ್ಯವನ್ನು ಶುಕ್ರವಾರದಿಂದ (ಮೇ 22) ಪುನರಾರಂಭಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಕಾಯ್ದಿರಿಸಿದ ಟಿಕೆಟ್‌ಗಳನ್ನು ಪಡೆದುಕೊಳ್ಳಲು ಕೌಂಟರ್‌ಗಳನ್ನು ಹಂತಹಂತವಾಗಿ ತೆರೆಯಲು ಇಲಾಖೆ ಮುಂದಾಗಿದ್ದು, ಮೊದಲ ಹಂತದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ, ವಿಜಯಪುರ, ಧಾರವಾಡ, ಹೊಸಪೇಟೆ ಮತ್ತು ವಾಸ್ಕೋಡಗಾಮದ ನಿಲ್ದಾಣಗಳಲ್ಲಿ ಕೌಂಟರ್‌ಗಳು ಆರಂಭವಾಗಲಿವೆ.

ಇಲಾಖೆಯಿಂದ ಪರವಾನಗಿ ಪಡೆದ ಏಜೆಂಟರು ಮತ್ತು ಸೇವಾ ಕೇಂದ್ರಗಳಲ್ಲಿಯೂ ಟಿಕೆಟ್‌ ನೀಡಬಹುದು. ಟಿಕೆಟ್‌ಗಳನ್ನು ಪಡೆಯುವ ವೇಳೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಮುಂದಿನ ಎರಡ್ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ರೈಲುಗಳ ಸಂಚಾರದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.