ಹುಬ್ಬಳ್ಳಿ: ಬಿಜೆಪಿ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ತಿರಂಗಾ ನಡಿಗೆ’ ಮಂಗಳವಾರ ಜರುಗಿತು.
ಮೂರುಸಾವಿರ ಮಠದ ಆವರಣದಿಂದ ಪ್ರಾರಂಭವಾದ ಮೆರವಣಿಗೆಯು ದುರ್ಗದಬೈಲ್ ವೃತ್ತದವರೆಗೆ ಸಾಗಿತು. ಭಾರತಾಂಬೆಯ ಚಿತ್ರವಿದ್ದ ಟ್ರ್ಯಾಕ್ಟರ್‌ನೊಂದಿಗೆ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಹೆಜ್ಜೆಹಾಕಿದರು. ‘ಭಾರತ್ ಮಾತಾಕಿ ಜೈ’ ಘೋಷಣೆ ಮೊಳಗಿಸಿದರು.
ಯುವ ಮೋರ್ಚಾ ಅಧ್ಯಕ್ಷ ಪ್ರವೀಣ ಕುಬಸದ ನೇತೃತ್ವ ವಹಿಸಿದ್ದರು. ರಾಜ್ಯ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಾಳಿಕಾಯಿ, ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಜಿಲ್ಲಾ ವಕ್ತಾರ ರಾಜು ಕೋರ್ಯಾಣಮಠ, ಮುಖಂಡರಾದ ಜಯತೀರ್ಥ ಕಟ್ಟಿ, ಅಶೋಕ ಕಾಟವೆ, ಡಾ. ಕ್ರಾಂತಿ ಕಿರಣ್, ಚಂದ್ರಶೇಖರ್ ಗೋಕಾಕ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.