ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈರುತ್ಯ ರೈಲ್ವೆ ಬೆಳಗಾವಿ– ಮೀರಜ್ ನಡುವೆ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಮುಂದುವರಿಸಲು ನಿರ್ಧರಿಸಿದೆ.
ಬೆಳಗಾವಿ– ಮೀರಜ್ – ಬೆಳಗಾವಿ (07301/07302/07303/07304) ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಆಗಸ್ಟ್ 1ರಿಂದ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 31ರವರೆಗೆ ಮಾತ್ರ ಈ ರೈಲುಗಳು ಸಂಚರಿಸಲಿವೆ ಎಂದು ತಿಳಿಸಲಾಗಿತ್ತು ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.