
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ತುಮಕೂರು ಮತ್ತು ಮಲ್ಲಸಂದ್ರ ರೈಲುನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿ ನಡೆಯುವ ಕಾರಣ ಕೆಲವು ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ.
ಡಿಸೆಂಬರ್ 17, 20, 21 ಮತ್ತು 24ರಂದು, ಕೆಎಸ್ಆರ್ ಬೆಂಗಳೂರು–ಧಾರವಾಡ ಎಕ್ಸ್‌ಪ್ರೆಸ್ ರೈಲು (12725) ಸಂಚಾರವು ಬೆಂಗಳೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರು ಬದಲಾಗಿ ಅರಸೀಕೆರೆಯಿಂದ ಸಂಚಾರ ಆರಂಭಿಸಲಿದೆ.
ಡಿ.17 ಮತ್ತು 24ರಂದು ಧಾರವಾಡ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು (12726) ಸಂಚಾರ ಬೆಂಗಳೂರು ಬದಲಾಗಿ ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.
ಡಿ.16 ಮತ್ತು 23ರಂದು ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು (17310) ಅರಸೀಕೆರೆ, ಹಾಸನ, ನೆಲಮಂಗಲ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. ಇದೇ ದಿನಗಳಲ್ಲಿ ವೇಲಂಕಣಿ–ವಾಸ್ಕೋ ಡ ಗಾಮ ಎಕ್ಸ್‌ಪ್ರೆಸ್ ರೈಲು (17316) ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ಡಿ.17, 20, 21 ಮತ್ತು 24ರಂದು ಮೈಸೂರು–ಬೆಳಗಾವಿ ಎಕ್ಸ್‌ಪ್ರೆಸ್ ರೈಲು (17326) ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಪಾಂಡವಪುರದಿಂದ ತಿಪಟೂರುವರೆಗೆ ನಿಲುಗಡೆ ಆಗುವುದಿಲ್ಲ.
ಡಿ.17 ಮತ್ತು 24ರಂದು ಯಶವಂತಪುರ–ಚಂಡೀಗಢ ಎಕ್ಸ್‌ಪ್ರೆಸ್ (22685), ಯಶವಂತಪುರ–ವಾಸ್ಕೋ ಡ ಗಾಮ ಎಕ್ಸ್‌ಪ್ರೆಸ್ (17309) ರೈಲುಗಳು ಮಾರ್ಗಮಧ್ಯೆ 15 ನಿಮಿಷ ನಿಯಂತ್ರಣವಾಗಲಿವೆ. 19 ಮತ್ತು 20ರಂದು ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು (17310) ಸಂಚಾರವನ್ನು ಮಾರ್ಗಮಧ್ಯೆ 30 ನಿಮಿಷ ನಿಯಂತ್ರಿಸಲಾಗುತ್ತದೆ.
ಯಶವಂತಪುರ–ಹಜರತ್ ನಿಜಾಮುದ್ದೀನ್ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (12649) ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ–ತಿರುವನಂತಪುರಂ ಉತ್ತರ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು (12777) 120 ನಿಮಿಷ ತಡವಾಗಿ ಹೊರಡಲಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.