ADVERTISEMENT

ಹುಬ್ಬಳ್ಳಿ: ರೈಲು ಸಂಚಾರ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 5:06 IST
Last Updated 16 ಜುಲೈ 2025, 5:06 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ಎಸ್‌ಎಸ್‌ಎಸ್‌ ಹುಬ್ಬಳ್ಳಿ– ರಾಮೇಶ್ವರಂ– ಎಸ್‌ಎಸ್‌ಎಸ್‌ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ರೈಲು (07355/07356) ಸಂಚಾರ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. 

ADVERTISEMENT

ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ಪ್ರಯಾಣವನ್ನು ಕೊನೆಗೊಳಿಸಲಿದೆ. ಅಲ್ಲಿಂದಲೇ ಹಿಮ್ಮುಖ ಪ್ರಯಾಣ ಪ್ರಾರಂಭಿಸಲಿದೆ. ಈ ರೈಲುಗಳು ಪ್ರಸ್ತುತ ಇರುವ ಸಂಯೋಜನೆ, ಸಮಯ ಮತ್ತು ನಿಲುಗಡೆಯೊಂದಿಗೆ ಸಂಚಾರ ಮುಂದುವರಿಸಲಿವೆ.

ಈ ಹಿಂದೆ ಜುಲೈ 26ರವರೆಗೆ ಸಂಚರಿಸಬೇಕಿದ್ದ ಎಸ್‌ಎಸ್‌ಎಸ್‌ ಹುಬ್ಬಳ್ಳಿ– ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು (07355) ಈಗ ಆಗಸ್ಟ್‌ 9ರಿಂದ ಆ.30 ವರೆಗೆ ನಾಲ್ಕು ಹೆಚ್ಚುವರಿ ಟ್ರಿಪ್‌ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಈಗ ರಾಮೇಶ್ವರಂ ಬದಲು ರಾಮನಾಥಪುರಂನಲ್ಲಿ ಸಂಚಾರ ಮೊಟಕುಗೊಳಿಸಲಿದೆ.

ಅದೇ ರೀತಿ, ಈ ಹಿಂದೆ ಜುಲೈ 27ರವರೆಗೆ ಸಂಚರಿಸಬೇಕಿದ್ದ ರಾಮೇಶ್ವರಂ - ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು (07356) ಈಗ ಆಗಸ್ಟ್ 10 ರಿಂದ 31 ರವರೆಗೆ ನಾಲ್ಕು ಹೆಚ್ಚುವರಿ ಟ್ರಿಪ್‌ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಈಗ ರಾಮೇಶ್ವರಂ ಬದಲು ರಾಮನಾಥಪುರಂನಿಂದ ಸಂಚಾರ ಪ್ರಾರಂಭಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.