ADVERTISEMENT

ಹು–ಧಾ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:26 IST
Last Updated 18 ಜೂನ್ 2025, 15:26 IST
ರುದ್ರೇಶ ಘಾಳಿ
ರುದ್ರೇಶ ಘಾಳಿ   

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರನ್ನು ಧಾರವಾಡ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ರುದ್ರೇಶ್ ಘಾಳಿ ಅವರು ಪ್ರಸಕ್ತ ವರ್ಷ ಜನವರಿ 27ರಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಲ್ಲದೆ, ಹುಬ್ಬಳ್ಳಿ–ಧಾರವಾಡ ಸ್ಮಾರ್ಟ್ ಸಿಟಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಧಾರವಾಡ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಜಯಶ್ರೀ ಶಿಂತ್ರಿ ಅವರನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಲಾಗಿದೆ.

ADVERTISEMENT

ರುದ್ರೇಶ ಘಾಳಿ ಅವರಿಂದ ತೆರವಾದ ಪಾಲಿಕೆಯ ಆಯುಕ್ತ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.