ADVERTISEMENT

ಹುಬ್ಬಳ್ಳಿ: ವಿಚಾರಣೆ ಮಾರ್ಚ್ 10ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 8:44 IST
Last Updated 3 ಫೆಬ್ರುವರಿ 2021, 8:44 IST

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಬಂಧಿತರಾಗಿದ್ದ ಕಾಶ್ಮೀರ ಮೂಲದ ಇಲ್ಲಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಬುಧವಾರ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಿದ್ಯಾರ್ಥಿಗಳು ಹಾಜರಾದರು.

ಭಾರಿ ಪೊಲೀಸ್ ಭದ್ರತೆಯಲ್ಲಿ ಮೂವರು ನ್ಯಾಯಾಲಯಕ್ಕೆ ಹಾಜರಾದರು.

ನ್ಯಾಯಾಧೀಶರು ವಿಚಾರಣೆಯನ್ನು ಮಾರ್ಚ್‌ 10ಕ್ಕೆ ಮುಂದೂಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.