ಹುಬ್ಬಳ್ಳಿ: ನಗರದ ಚಿಟಗುಪ್ಪಿ ಆಸ್ಪತ್ರೆ ಬಳಿ ಬುಧವಾರ ವ್ಯಕ್ತಿಯೊಬ್ಬರಿಂದ ಹಣ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಘಟನೆ ನಡೆದ 24 ತಾಸಿನೊಳಗೆ ಗುರುವಾರ ಬಂಧಿಸಿದ್ದಾರೆ.
ಮಲಿಕ್ ಮತ್ತು ಹಾಜಿ ಅಲಿ ಬಂಧಿತರು. ಆರೋಪಿಗಳಿಂದ ₹11 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಆಟೊ ಮತ್ತು ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳಬಂಧನದಿಂದ ವಿದ್ಯಾನಗರ ಮತ್ತು ಉಪನಗರ ಠಾಣೆ ವ್ಯಾಪ್ತಿಯ ಎರಡು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.