ADVERTISEMENT

ಹುಬ್ಬಳ್ಳಿಗೆ ಬಂದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 13:03 IST
Last Updated 2 ಸೆಪ್ಟೆಂಬರ್ 2021, 13:03 IST
ಅಮಿತ್‌ ಶಾ ತಂಗಿರುವ ವಿಮಾನ ನಿಲ್ದಾಣ ರಸ್ತೆಯ ಅನಂತ್ ಗ್ರ್ಯಾಂಡ್ ಹೋಟೆಲ್ ‌ಮುಂಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಅಮಿತ್‌ ಶಾ ತಂಗಿರುವ ವಿಮಾನ ನಿಲ್ದಾಣ ರಸ್ತೆಯ ಅನಂತ್ ಗ್ರ್ಯಾಂಡ್ ಹೋಟೆಲ್ ‌ಮುಂಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.   

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಬಂದಿದ್ದಾರೆ.

ಅವರು ತಂಗಿರುವ ವಿಮಾನ ನಿಲ್ದಾಣ ರಸ್ತೆಯ ಅನಂತ್ ಗ್ರ್ಯಾಂಡ್ ಹೋಟೆಲ್ ‌ಮುಂಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೊಯೆಲ್, ಕೇಂದ್ರ ಕೌಶಲಾಭಿವೃದ್ದಿ ಸಚಿವ ಧರ್ಮೇಂದ್ರ ಪ್ರಧಾನ್, ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ಪಾಟೀಲ್ ದಾನ್ವೆ, ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ್ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.