
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಇಲ್ಲಿನ ಉಣಕಲ್ ಸಿದ್ದಪ್ಪಜ್ಜನ ರಥೋತ್ಸವ ಶನಿವಾರ ಸಂಜೆಸಡಗರದಿಂದ ನಡೆಯಿತು.
ಕೋವಿಡ್ ಕಾರಣಕ್ಕಾಗಿ ಹಿಂದಿನ ಎರಡು ವರ್ಷ ಈ ವರ್ಷದಷ್ಟು ಸಂಭ್ರಮದಿಂದ ಜಾತ್ರೆ ನಡೆದಿರಲಿಲ್ಲ.
ಬೆಳಿಗ್ಗೆಯಿಂದಲೇ ಮಠದ ಕೈಲಾಸ ಮಂಟಪದಲ್ಲಿ ಸಾಮೂಹಿಕ ವಿವಾಹ ಜರುಗಿದವು. ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಹಾಗೂ ದೇವರ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಸಾವಿರಾರು ಜನ ಭಕ್ತರು ಸಾಕ್ಷಿಯಾದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.