ಉಪ್ಪಿನಬೆಟಗೇರಿ: ‘ಸಮಾಜದ ಏಳಿಗೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ’ ಎಂದು ಉಪ್ಪಿನಬೆಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸೀರ ಅಹ್ಮದ್ ಮಾಳಗಿಮನಿ ಹೇಳಿದರು.
ಗ್ರಾಮದ ವಿಠ್ಠಲ ಮಂದಿರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ₹1.5 ಲಕ್ಷ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ದಾಖಲೆ ಇಲ್ಲದೆ ಸಾಲ ನೀಡುತ್ತದೆ. ಇದನ್ನು ಸದುಪಯೋಗ ಮಾಡಿಕೊಂಡು ಮರು ಪಾವತಿಸಿದರೆ ಜನರಿಗೆ ಮತ್ತಷ್ಟು ಯೋಜನೆ ತಲುಪಿಸಲು ಸಾಧ್ಯ ಎಂದರು.
ಮಹರ್ಷಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಯಲ್ಲಪ್ಪ ಕಳ್ಳಿ ಮಾತನಾಡಿದರು. ಜನಜಾಗೃತಿ ವೇದಿಕೆಯ ಕಿರಣ್, ತಾಲ್ಲೂಕು ಯೋಜನಾಧಿಕಾರಿ ಅಶೋಕ ಕೆ., ದೀನಬಂಧು ತಳವಾರ, ನಾಗಪ್ಪ ಪೂಜಾರ, ರೇಣುಕಾ ರಾಯ್ಕರ, ಸಾಯಿರಾಬಾನು ಲಾಲ್ಮೀಯಾ, ನಾಮದೇವ ತಳವಾರ, ಸುರೇಶಬಾಬು ತಳವಾರ, ವಲಯ ಮೇಲ್ವಿಚಾರಕಿ ಪಲ್ಲವಿ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.