
ಪ್ರಜಾವಾಣಿ ವಾರ್ತೆ
ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ತಡಕೋಡ ಗ್ರಾಮದ ವಿರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವೀರಭದ್ರ ಸ್ವಾಮಿ ಮೂರ್ತಿಯ ರಥೋತ್ಸವ ಭಾನುವಾರ ಭಕ್ತರ ಜಯಘೋಷಗಳ ನಡುವೆ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ಮೂರ್ತಿಗೆ ಅರ್ಚಕರಿಂದ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜೆ ಕಾರ್ಯಗಳು ನೆರವೇರಿದವು. ಮಧ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಸಂಜೆ 5 ಗಂಟೆಗೆ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವು ದೇವಸ್ಥಾನದಿಂದ ಸಕಲ ವಾದ್ಯಮೇಳದೊಂದಿಗೆ ಆರಂಭವಾಯಿತು. 500 ಮೀಟರ್ ದೂರದ ಬಸವೇಶ್ವರ ದೇವಸ್ಥಾನದವರೆಗೆ ರಥ ಎಳೆದು ಮೂಲ ಸ್ಥಳಕ್ಕೆ ತರಲಾಯಿತು. ಭಕ್ತರು ತೇರಿಗೆ ಬಾಳೆಹಣ್ಣು, ಉತ್ತತ್ತಿ, ನಿಂಬೆ ಎಸೆದು ಭಕ್ತಿ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.