
ಉಪ್ಪಿನಬೆಟಗೇರಿ: ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ತಲುಪದಿದ್ದರೆ ಜನರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಥವಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ತಿಳಿಸಬೇಕು’ ಎಂದು ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಹೇಳಿದರು.
ಉಪ್ಪಿನಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಲ್ಲಿನ ಶ್ರೀಗುರು ವಿರೂಪಾಕ್ಷೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಶಿಬಿರದಲ್ಲಿ ಅವರು ಮಾತನಾಡಿದರು.
‘ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. ಅರ್ಹ ಫಲಾನುಭವಿಗಳಿಗೆ ಎಲ್ಲ ಯೋಜನೆಗಳು ತಲುಪಬೇಕು’ ಎಂದರು.
ಧಾರವಾಡ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದರು.
ತಾಲ್ಲೂಕು ಪಂಚಾಯಿತಿ ಇಒ ಗಂಗಾಧರ ಕಂದಕೂರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸೀರ ಅಹ್ಮದ ಮಾಳಗಿಮನಿ, ಕಾರ್ತಿಕ ಗೋಕಾಕ, ರೇಣುಕಾ ಕಳ್ಳಿಮನಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಛಾಯಾ ಹೆಗಡೆ, ಪಿಡಿಒ ಮಧುಸೂದನ ದೇಶಪಾಂಡೆ, ಸದಸ್ಯರಾದ ಮಂಜುನಾಥ ಮಸೂತಿ, ಸಾಯಿರಾಬಾನು ಲಾಲ್ಮೀಯಾ, ಮುಸ್ತಾಕಅಹ್ಮದ ನದಾಫ್, ಸಯ್ಯದಸಾಬ ಮದನಿ, ಸರೋಜಿನಿ ಮಡಿವಾಳರ, ಶಿವಾನಂದ ಸವಸುದ್ಧಿ, ಸಂಜಯ ಕೊಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.