ADVERTISEMENT

ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 9:13 IST
Last Updated 23 ಡಿಸೆಂಬರ್ 2021, 9:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಸಮುತ್ಕರ್ಷ ಟ್ರಸ್ಟ್ ಕರ್ನಾಟಕದ ಸಮುತ್ಕರ್ಷ ಐಎಎಸ್ ಅಕಾಡೆಮಿಯಿಂದ ಯುಪಿಎಸ್‌ಸಿ ಪರೀಕ್ಷೆಗಳಿಗೆ 2022ರ ಜನವರಿ 1ರಿಂದ ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಜಿತೇಂದ್ರ ನಾಯಕ ಹೇಳಿದರು.

ಬೆಂಗಳೂರಿನ ರಾಜಾಜಿನಗರದಲ್ಲಿರುವ ಹಾಗೂ ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್‌ನ ಕೆಎಲ್‌ಇ ಸೆಂಟರ್ ಫಾರ್ ಎಕ್ಸಲೆನ್ಸ್‌ನ ಕಟ್ಟಡದಲ್ಲಿ ತರಬೇತಿ ನೀಡಲಾಗುವುದು. ದೆಹಲಿಯ ನುರಿತ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ.ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಅಕಾಡೆಮಿಯ 11 ಮಂದಿ ತೇರ್ಗಡೆಯಾಗಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಂಟು ತಿಂಗಳ ತರಬೇತಿಗೆ ₹70 ಸಾವಿರ ಶುಲ್ಕವಿದ್ದು, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಆಕಾಂಕ್ಷಿಗಳು ಪ್ರವೇಶಕ್ಕಾಗಿ ಡಿ. 31ರೊಳಗೆ ಮೊ: 96634 24767 ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: www.samutkarshias.in ವೀಕ್ಷಿಸಬಹುದು ಎಂದರು.

ADVERTISEMENT

ಟ್ರಸ್ ಸದಸ್ಯ ಅಚ್ಯುತ ಲಿಮಯೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.