ADVERTISEMENT

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿಗೆ ವಾಟಾಳ್‌ ನಾಗರಾಜ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 7:25 IST
Last Updated 13 ಜೂನ್ 2020, 7:25 IST
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್ ಅವರು ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್ ಅವರು ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು   

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್ ಅವರು ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು.

ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಿ, ಎಲ್ಲರನ್ನೂ ಉತ್ತೀರ್ಣ ಮಾಡಬೇಕು ಎಂದು ಒತ್ತಾಯಿಸಿದರು.

9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರೊಂದಿಗೆ ಪೋಷಕರು ಬರಲಿದ್ದಾರೆ. ಹೊರಬರುವ ಲಕ್ಷಾಂತರ ಜನರ ರಕ್ಷಣೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.

ADVERTISEMENT

ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಇಲ್ಲಿಯೂ ಹಾಗೆಯೇ ಮಾಡಬೇಕು ಎಂದು ಆಗ್ರಹಿಸಿದರು.

ಕೊರೊನಾ ಕಡಿಮೆ ಇದ್ದಾಗ ಬಂದ್‌ ಮಾಡಿ, ಜಾಸ್ತಿ ಆದ ಮೇಲೆ ಸಂತೆ ಮಾಡುತ್ತಿದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಆನ್‌ಲೈನ್‌ ಶಿಕ್ಷಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಇದು ಪೋಷಕರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.