ADVERTISEMENT

ಧಾರವಾಡ | ‘ಸಮಾಜದ ಏಳಿಗೆಗೆ ಶ್ರಮಿಸಿದ್ದ ಶಿವಶಂಕರಪ್ಪ’

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 3:20 IST
Last Updated 16 ಡಿಸೆಂಬರ್ 2025, 3:20 IST
ಧಾರವಾಡದ ಲಿಂಗಾಯತ ಭವನದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಧಾರವಾಡದ ಲಿಂಗಾಯತ ಭವನದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಧಾರವಾಡ: ‘ಶಾಮನೂರು ಶಿವಶಂಕರಪ್ಪ ಅವರು ವೀರಶೈವ– ಲಿಂಗಾಯತ ಸಮಾಜದ ಏಳಿಗೆಗೆ ಶ್ರಮಿಸಿದವರು’ ಎಂದು ಅಖಿಲ ಭಾರತ ವೀರಶೈವ– ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಪಾಟೀಲ ಹೇಳಿದರು.

ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ– ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ವತಿಯಿಂದ ಸೋಮವಾರ ನಡೆದ ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

‘ಶಿವಶಂಕರಪ್ಪ ಅವರು ಶೈಕ್ಷಣಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದರು. ಅನೇಕ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ, ಉದ್ಯೋಗ ನೀಡಿದರು. ಅನೇಕರಿಗೆ ಸಹಾಯ ಮಾಡಿದ್ದರು’ ಎಂದರು.

ADVERTISEMENT

ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ್, ಕೋಶಾಧ್ಯಕ್ಷ ಮಡಿವಾಳಪ್ಪ ಸಿರಿಯಣ್ಣವರ, ಉಪಾಧ್ಯಕ್ಷರಾದ ಶಂಕರ ಕುಂಬಿ, ಪಾರ್ವತಿ ಹಾಲಬಾವಿ, ಕಾರ್ಯದರ್ಶಿ ಸುವರ್ಣ ಬಿರಾದಾರ, ನಿರ್ದೇಶಕರಾದ ಬಸವರಾಜ ಗೊಲ್ಲಪ್ಪನವರ, ರಾಜಶೇಖರ ಉಪ್ಪಿನ, ಮಹೇಶ ಬಿಳೆಹಾಳ್, ಬಸವಂತಪ್ಪ ತೋಟದ, ಮೃತ್ಯುಂಜಯ ಬನ್ನೂರು, ವಿಜಯಲಕ್ಷ್ಮಿ ಕಲ್ಯಾಣಶೆಟ್ಟರ್, ಸಂಧ್ಯಾ ಅಂಬದಗಟ್ಟಿ, ಯುವ ಘಟಕದ ಅಧ್ಯಕ್ಷ ಆನಂದ ಗಡೇಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.