ಹುಬ್ಬಳ್ಳಿ: ‘ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಕ್ಕಾಗ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ’ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
‘ ಹಿಂದೆ ಬಿಜೆಪಿ ಸರ್ಕಾರ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಘೋಷಿಸಿದಾಗ, ನಾವು ಒಪ್ಪಿರಲಿಲ್ಲ. ಅದು ನ್ಯಾಯಾಲಯದ ಅಂಗಳದಲ್ಲಿದೆ’ ಎಂದು ಮಂಗಳವಾರ ತಿಳಿಸಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕೂಡಲಸಂಗಮದಲ್ಲಿನ ಪೀಠದ ಸಮಸ್ಯೆಯನ್ನು ನಮ್ಮ ಸಮುದಾಯದ ಹಿರಿಯರು ಬಗೆಹರಿಸುವರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.