ರೈಲು
– ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು (07377/07378) ನಿಯಮಿತ ಎಕ್ಸ್‌ಪ್ರೆಸ್ ಆಗಿ ಉನ್ನತೀಕರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಇನ್ನು ಮುಂದೆ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ಎಕ್ಸ್‌ಪ್ರೆಸ್ (17377/17378) ಎಂದು ಸಂಚರಿಸಲಿವೆ.
ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ (17377) ರೈಲು ಸೆಪ್ಟೆಂಬರ್ 1ರಿಂದ, ಮಂಗಳೂರು ಸೆಂಟ್ರಲ್–ವಿಜಯಪುರ ಎಕ್ಸ್‌ಪ್ರೆಸ್ (17378) ರೈಲು ಸೆ.2ರಿಂದ ಸಂಚಾರ ಆರಂಭಿಸಲಿವೆ. ಸದ್ಯದ ವೇಳಾಪಟ್ಟಿ, ನಿಲುಗಡೆ, ಬೋಗಿಗಳ ಸಂಯೋಜನೆ ಮತ್ತು ನಿರ್ವಹಣಾ ಮಾದರಿಯೊಂದಿಗೆ ರೈಲುಗಳು ಸಂಚರಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.