ADVERTISEMENT

ಹುಬ್ಬಳ್ಳಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2023, 16:16 IST
Last Updated 21 ಡಿಸೆಂಬರ್ 2023, 16:16 IST

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸಾಧನೆಗಳ ಕುರಿತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಚಾರ ವಾಹನಕ್ಕೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಹಳೇ ಹುಬ್ಬಳ್ಳಿಯ ನೇಕಾರ ನಗರ ವೃತ್ತದಲ್ಲಿ ಚಾಲನೆ ನೀಡಿದರು. 

ಲಿಂಗರಾಜ ಪಾಟೀಲ ಮಾತನಾಡಿ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಕಿಸಾನ್ ಕೆಡಿಟ್ ಕಾರ್ಡ್, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ. ಕೆಲವು ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಪಲಾನುಭಾವಿಗಳಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ವಿತರಿಸಲಾಯಿತು. ಕೇಂದ್ರ ಸರ್ಕಾರದ 2024ರ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕಿರುಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ADVERTISEMENT

ಹು-ಧಾ ಪೂರ್ವ ಮತ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ, ಪಾಲಿಕೆ ಸದಸ್ಯ ಶಾಂತ ಹಿರೇಮಠ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಯ್ಯಾ ಹಿರೇಮಠ, ಮಂಜುಳಾ ಪರಭತ್, ಮಾಧ್ಯಮ ಸಂಚಾಲಕ ಲಕ್ಷ್ಮೀಕಾಂತ ಘೋಡಕೆ, ಎಸ್.ಬಿ.ಐ ಹಳೇ ಹುಬ್ಬಳ್ಳಿ ಶಾಖೆಯ ಬ್ಯಾಂಕ್ ಮ್ಯಾನೇಜರ್ ಗಂಗಾಧರ್ ಕೆ., ಮಧುರಾ ಕಾಲೊನಿ ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ, ಶಿಬಿರಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.