ADVERTISEMENT

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್

ಯೋಗೀಶಗೌಡ ಗೌಡರ ಕೊಲೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 7:49 IST
Last Updated 22 ಡಿಸೆಂಬರ್ 2020, 7:49 IST
   

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಲ್ಲಿನ ಹೈಕೋರ್ಟ್‌ ಜ. 6ಕ್ಕೆ ಮುಂದೂಡಿದೆ.

ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಲಯ ತಿರಸ್ಕರಿಸಿದ್ದರಿಂದಾಗಿ ಅವರ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಗೆ ತಕರಾರು ಸಲ್ಲಿಸಲು ಸಿಬಿಐಗೆ ಅವಕಾಶ ನೀಡಿ, ವಿಚಾರಣೆಯನ್ನು ಡಿ. 22ಕ್ಕೆ ಹೈಕೋರ್ಟ್‌ ನಿಗದಿಪಡಿಸಿತ್ತು.

ಅದರಂತೆ ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ, ಅರ್ಜಿಗೆ ಸಂಬಂಧಿಸಿದಂತೆ ವಿವರವಾದ ತಕರಾರು ಸಲ್ಲಿಸಬೇಕಿದ್ದು, ಇನ್ನಷ್ಟು ಕಾಲಾವಕಾಶ ಅಗತ್ಯವಿದೆ. ಹೀಗಾಗಿ ಸಮಯ ನೀಡುವಂತೆ ಸಿಬಿಐ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ADVERTISEMENT

ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯಪೀಠ ವಿಚಾರಣೆಯನ್ನು ಬರುವ ಜ. 6ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.