ADVERTISEMENT

ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗುತ್ತೇನೆ: ವಿನಯ ಕುಲಕರ್ಣಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 9:09 IST
Last Updated 11 ಜೂನ್ 2025, 9:09 IST
   

ಧಾರವಾಡ: 'ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇನೆ. ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗುತ್ತೇನೆ' ಎಂದು ಶಾಸಕ ವಿನಯ ಕುಲಕರ್ಣಿ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ನನ್ನ ವಿರುದ್ಧ ಹುನ್ನಾರ ನಡೆದಿದೆ. ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ. ಸತ್ಯಕ್ಕೆ ಜಯ ಸಿಗುವ ನಂಬಿಕೆ ಇದೆ' ಎಂದರು.

'ಬಸವಣ್ಣನ ಕಾಲದಲ್ಲೂ ಕೊಂಡಿ ಮಂಚಣ್ಣಗಳು ಇದ್ದರು. ಇವತ್ತೂ ಇದ್ದಾರೆ' ಎಂದೂ ಮಾರ್ಮಿಕವಾಗಿ ನುಡಿದರು.

ADVERTISEMENT

'ಕ್ಷೇತ್ರದಲ್ಲಿ ನಾನು ಇಲ್ಲದಿದ್ದರೂ ಪತ್ನಿ, ಪುತ್ರಿ, ಪಕ್ಷದ ಮುಖಂಡರು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾರೆ. ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ' ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಜೂನ್ 6ರಂದು ರದ್ದುಪಡಿಸಿತ್ತು. ವಾರದೊಳಗೆ ವಿಚಾರಣಾ ಕೋರ್ಟ್‌ ಮುಂದೆ ಶರಣಾಗುವಂತೆ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.