ಹುಬ್ಬಳ್ಳಿ: ವೈಯಕ್ತಿಕ ಕೆಲಸದ ಮೇಲೆ ಶುಕ್ರವಾರ ದೆಹಲಿಗೆ ಬಂದಿದ್ದೇನೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ದೆಹಲಿ ಭೇಟಿ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ಪಕ್ಷದ ಮುಖಂಡರ ಕರೆ ಮೇರೆಗೆ ಅಥವಾ ಪಕ್ಷದ ಮುಖಂಡರನ್ನು ಭೇಟಿಯಾಗಲು ದೆಹಲಿಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಿ ಬಂದ ಮರುದಿನವೇ ಜಗದೀಶ ಶೆಟ್ಟರ್ ಅವರು ದೆಹಲಿಗೆ ತೆರಳಿರುವುದಕ್ಕೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಶೆಟ್ಟರ್ ಅವರ ಸಹೋದರ ಪ್ರದೀಪ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರು ಪ್ರತಿನಿಧಿಸುತ್ತಿರುವ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿದ್ದಾರೆ. ಟಿಕೆಟ್ ಖಚಿತ ಪಡಿಸಿಕೊಳ್ಳುವ ದೃಷ್ಟಿಯಿಂದಲೂ ದೆಹಲಿಗೆ ಭೇಟಿ ನೀಡಿರಬಹುದು ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.