ADVERTISEMENT

ವಿವೇಕಾನಂದರ 159ನೇ ಜಯಂತಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 15:20 IST
Last Updated 19 ಜನವರಿ 2022, 15:20 IST
ಕುಂದಗೋಳ ತಾಲ್ಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸಂಘದವರು ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು
ಕುಂದಗೋಳ ತಾಲ್ಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸಂಘದವರು ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು   

ಗುಡಗೇರಿ: ಸ್ವಾಮಿ ವಿವೇಕಾನಂದರು ಉತ್ಕೃಷ್ಟ ಸಾಧನೆ ಮೂಲಕ ಎಲ್ಲರ ಮನದಲ್ಲಿ ನೆಲೆಸಿದ್ದು, ಯುವಕರಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಿಕ್ಷಕ ಎನ್.ಎಚ್.ಮುಲ್ಲಾ ಹೇಳಿದರು.

ಕುಂದಗೋಳ ತಾಲ್ಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸಂಘದವರು ಹಮ್ಮಿಕೊಂಡ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಈಗಿನ ಯುವಜನತೆ ಮೊಬೈಲ್‌ ಫೋನ್‌ಗಳ ಜೊತೆ ಸಮಯ ಕಳೆದು ಜೀವನದ ಅತ್ಯಮೂಲ್ಯ ಗಳಿಗೆ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಹೊರಬಂದು ಮಹಾಪುರುಷರ ಜೀವನಗಾಥೆ ಓದಬೇಕು’ ಎಂದರು.

ನಿವೃತ್ತ ಶಿಕ್ಷಕ ವಿ.ಡಿ. ಯರಗುಪ್ಪಿ ಮಾತನಾಡಿ ‘ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು’ ಎಂದರು.

ADVERTISEMENT

ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ ಎನ್.ಜಿ.ಪೂಜಾರ ವಹಿಸಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಗಂಗಾಧರ ಮೇಗುಂಡಿ, ಗುರುನಾಥ ಹೊನ್ನಿಹಳ್ಳಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.