
ಪ್ರಜಾವಾಣಿ ವಾರ್ತೆಸಂತೋಷ್ ಲಾಡ್
ಧಾರವಾಡ: ‘ಬಿಹಾರದಲ್ಲಿ 25 ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿದೆ. ಆ ರಾಜ್ಯದಲ್ಲಿ ಬಿಜೆಪಿ ಸಾಧನೆ ಏನು?’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿಯವರು ಪ್ರಜಾಪ್ರಭುತ್ವ ಮೌಲ್ಯ, ವ್ಯವಸ್ಥೆಗಳನ್ನು ಗಾಳಿಗೆ ತೂರಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.
‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡು ವರ್ಷ ಅಧ್ಯಯನ ಮಾಡಿ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯವರು ಆರು ವಿಮಾನ ನಿಲ್ದಾಣ ಮಾಡಿದ್ಧಾರೆ. ಪ್ರಧಾನಿ ಮೋದಿ ಅವರೇ ಉದ್ಘಾಟಿಸಿದ್ದಾರೆ. ಆ ನಿಲ್ದಾಣಗಳಿಂದ ಒಂದೂ ವಿಮಾನ ಹಾರಾಟ ನಡೆಸಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.