
ಹುಬ್ಬಳ್ಳಿ: ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರ ಸಹೋದರ ಮರಿಯಾದಾಸ್‌ನನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದರು.
ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಎರಡು ದಿನಗಳಿಂದ ಕರೆದರೂ ಹಾಜರಾಗಿರಲಿಲ್ಲ. ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದರಿಂದ ಮರಿಯಾದಾಸ್ ಖುದ್ದು ಹಾಜರಾಗಿದ್ದರು.
‘ಸಹೋದರಿ ಸುಜಾತಾ ಮೇಲೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಸುವರ್ಣಾ ಕಲ್ಲಕುಂಟ್ಲಾ ಸೇರಿ ಒಂಬತ್ತು ಜನರು ಹಲ್ಲೆ ಮಾಡಿದ್ದಾರೆ’ ಎಂದು ಕೇಶ್ವಾಪೂರ ಠಾಣೆಯಲ್ಲಿ ಮರಿದಾಸ್ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.