
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಹುಬ್ಬಳ್ಳಿ: ಚಾಲುಕ್ಯನಗರದಲ್ಲಿ ನಡೆದ ಮಹಿಳೆ ವಿವಸ್ತ್ರ, ಹಲ್ಲೆ, ಕೊಲೆ ಯತ್ನ, ಬೆದರಿಕೆ, ದೌರ್ಜನ್ಯ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದ ತನಿಖೆಗೆ ಸಿಐಡಿ ಅಧಿಕಾರಿಗಳು ಮೂರು ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿದ್ದಾರೆ.
ಜ. 2 ರಿಂದ ಜ. 6ರವರೆಗೆ ದಾಖಲಾದ ಎಲ್ಲ ಆರು ಪ್ರಕರಣಗಳ ಆರೋಪಿಗಳ ವೈಯಕ್ತಿಕ ಮಾಹಿತಿ, ಅವರ ಹಿನ್ನೆಲೆ, ಕುಟುಂಬದವರ ವಿವರ, ಮೊಬೈಲ್ ಸಂಖ್ಯೆ ಹಾಗೂ ಮೊಬೈಲ್ ಕರೆಗಳ ಮಾಹಿತಿ (ಸಿಡಿಆರ್) ಸಂಗ್ರಹಿಸುತ್ತಿದ್ದಾರೆ.
ಮಹಿಳೆ ವಿವಸ್ತ್ರ ಪ್ರಕರಣ ಕುರಿತು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಹಾಗೂ ಹಂಚಿಕೆಯಾಗಿರುವ ವಿಡಿಯೊಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.