ADVERTISEMENT

ಗುಡಗೇರಿ: ಮಹಿಳಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2022, 2:39 IST
Last Updated 18 ಮಾರ್ಚ್ 2022, 2:39 IST
ಗುಡಗೇರಿ ಗ್ರಾಮದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು
ಗುಡಗೇರಿ ಗ್ರಾಮದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು   

ಗುಡಗೇರಿ: ಮಹಿಳೆಯರು ಈಗ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಶಾರದಾ ಕೆ. ನಡುವಿನಮನಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ಕೋವಿಡ್ ಸಂದರ್ಭದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಇದು ಮಹಿಳೆಯರ ಶಕ್ತಿಗೆ ಸಾಕ್ಷಿಯಾಗಿದ್ದು, ಮಹಿಳೆಗೆ ರಾಜಕೀಯವಾಗಿಯೂ ಇನ್ನಷ್ಟು ಆದ್ಯತೆ ಸಿಗಬೇಕು’ ಎಂದರು.

ಗ್ರಾಮಪಂಚಾಯತಿ ಅಭಿವೃದ್ದಿ ಅಧಿಕಾರಿ ಎ.ಕೆ ಧರ್ಮಣ್ಣ ಮಾತನಾಡಿ ‘ಸರ್ಕಾರ ಮಹಿಳಾ ಸ್ವಸಹಾಯ ಸಂಘಗಳಿಗೆ ಉದ್ಯೋಗ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದರು.

ADVERTISEMENT

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು. ಸದಸ್ಯರಾದ ಸುಜಾತಾ ದ್ಯಾಪಾಯಿ, ಸುಶೀಲವ್ವ ಹೆಗ್ಗಣ್ಣವರ, ದ್ರಾಕ್ಷಾಯಣಿ ಶಿರೂರ, ಗಂಗವ್ವ ಕರೆಗಾರ, ಕವಿತಾ ತಡಸದ, ರೇಖಾ ಗೋವಿಂದಪ್ಪನವರ ಅನೇಕರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.