ಧಾರವಾಡ: ಕೃಷಿ ಮೇಳದಲ್ಲಿ ಲಾರಿಯಿಂದ ಟ್ರಾಕ್ಟರ್ ಇಳಿಸುವಾಗ ಕಂಬಿ ಜರಿದು ಟ್ರಾಕ್ಟರ್ ನಿಂದ ಬಿದ್ದು ಮೃತಪಟ್ಟ ಪರಶುರಾಮ ಅವರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಒಬ್ಬರಿಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗ ನೀಡಬೇಕು ಎಂದು ಸಮತಾ ಸೇನೆ ಸಂಘಟನೆಯವರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷಿ ಯಂತ್ರೋಪಕರಣ ಪ್ರದರ್ಶನ ಮಳಿಗೆ ಭಾಗದಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಹಾರ ಮತ್ತು ಉದ್ಯೋಗ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸಂಘಟನೆಯ ದಿವಾನ ಬಳ್ಳಾರಿ, ಕೃಷ್ಣ ಗುಮ್ಮಗೋಳ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.