ADVERTISEMENT

ಯೋಗಾಸನ: ಸಾನ್ವಿ ತಟ್ಟೀನ್‌ ದ್ವಿತೀಯ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 5:58 IST
Last Updated 14 ನವೆಂಬರ್ 2022, 5:58 IST
ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸಾನ್ವಿ ತಟ್ಟೀನ್‌. ರೋಟರಿ ಇಂಗ್ಲಿಷ್‌ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಾಂಡ್ರಾ ಫೋನ್ಸೆಕಾ ಇದ್ದಾರೆ
ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸಾನ್ವಿ ತಟ್ಟೀನ್‌. ರೋಟರಿ ಇಂಗ್ಲಿಷ್‌ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಾಂಡ್ರಾ ಫೋನ್ಸೆಕಾ ಇದ್ದಾರೆ   

ಹುಬ್ಬಳ್ಳಿ: ಯೋಗ ಫೆಡರೇಷನ್‌ ಆಫ್‌ ಇಂಡಿಯಾದ ಪಂಜಾಬ್‌ ಯೋಗ ಅಸೋಶಿಯೇಷನ್‌ ಪಂಜಾಬಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ದೇಶಪಾಂಡೆನಗರದ ರೋಟರಿ ಇಂಗ್ಲಿಷ್‌ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಾನ್ವಿ ವಿ. ತಟ್ಟೀನ್‌ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾಳೆ.

ವಿದ್ಯಾರ್ಥಿನಿ ಸಾಧನೆಗೆ ಎನ್‌ಎಲ್‌ಇ ಸೊಸೈಟಿಯ ಕಾರ್ಯದರ್ಶಿ ರಾಜಾ ದೇಸಾಯಿ, ಅಧ್ಯಕ್ಷ ಡಾ.ಪಿ.ವಿ. ದತ್ತಿ, ಜಂಟಿ ಕಾರ್ಯದರ್ಶಿ ಶಿವರಾಮ ಹೆಗಡೆ, ಮುಖ್ಯ ಶಿಕ್ಷಕಿ ಸಾಂಡ್ರಾ ಫೋನ್ಸೆಕಾ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT