ADVERTISEMENT

ಯೋಗೀಶಗೌಡ ಕೊಲೆ ಪ್ರಕರಣ: ಬಿಜೆಪಿ ದ್ವೇಷದ ರಾಜಕಾರಣ -ಪಾಟೀಲ ಕಿಡಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 5:21 IST
Last Updated 5 ನವೆಂಬರ್ 2020, 5:21 IST
 ಅನಿಲಕುಮಾರ ಪಾಟೀಲ
ಅನಿಲಕುಮಾರ ಪಾಟೀಲ   

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ ಗೌಡ ಗೌಡರ್‌ ಕೊಲೆ ಪ್ರಕರಣದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ಸಿಲುಕಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕು ಇದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟವರಿಂದ ಬಲವಂತವಾಗಿ ಹೇಳಿಕೆಗಳನ್ನು ಪಡೆಯಲಾಗುತ್ತಿದೆ’ ಎಂದು ಅವರು ದೂರಿದರು. ಯಾರು ಏನೇ ಮಾಡಿದರೂ, ನಮಗೆ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಪಾರ ನಂಬಿಕೆಯಿದೆ. ಅಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದರು.

2016ರ ಜೂನ್ 15ರಂದು ನಡೆದಿದ್ದ ಯೋಗೀಶ ಗೌಡ ಗೌಡರ್‌ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಯೋಗೀಶ್ ಗೌಡ ಕುಟುಂಬದವರು ಆರೋಪಿಸಿದ್ದರು. ವಿನಯ ಅವರನ್ನು ಗುರುವಾರ ಬೆಳಿಗ್ಗೆಯಿಂದಲೇ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.